ಗಂಡ ಹೋಟೆಲ್ ಗೆ ಕರೆದುಕೊಂಡು ಹೋಗದಿದ್ದಕ್ಕೆ ಹೆಂಡತಿ ಆತ್ಮಹತ್ಯೆ
ಚಿಕ್ಕಮಗಳೂರಿನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. 24 ವರ್ಷದ ಮಹಿಳೆ ತನ್ನ 4 ಮತ್ತು ಒಂದೂವರೆ ವರ್ಷದ ಮಕ್ಕಳೊಂದಿಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಈ ವೇಳೆ ನೆರೆಹೊರೆಯವರು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೂವರೂ ಸಾವನ್ನಪ್ಪಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಗಂಡ ಹೋಟೆಲ್ ಗೆ ಕರೆದೊಯ್ಯುತ್ತಿಲ್ಲ ಎಂಬ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿತ್ತಂತೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.