ನೌಕರನ ರಾಜೀನಾಮೆ ವಾಪಸ್ ಹಕ್ಕು ಪತ್ನಿಗಿಲ್ಲ: ಹೈಕೋರ್ಟ್
ಉದ್ಯೋಗಿಯು ಉದ್ಯೋಗದಾತರಿಗೆ ಸಲ್ಲಿಸಿದ ರಾಜೀನಾಮೆ ಪತ್ರವನ್ನು ಆತನ ಪರವಾಗಿ ಪತ್ನಿ ಅಥವಾ ಮಕ್ಕಳು ಹಿಂಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಡಿ.ವೆಂಕಟೇಶ್ ಎಂಬುವರು ಸಲ್ಲಿಸಿದ್ದ ಮೇಲ್ಮನವಿಯನ್ನ ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠವು ಈ ಆದೇಶ ಮಾಡಿದೆ.