ಪತ್ನಿ ಕೊಂದು, ಪತಿಯೂ ಆತ್ಮಹತ್ಯೆ
ಪತ್ನಿಯನ್ನ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪತಿಯು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯ ಜನತಾ ಕಾಲೋನಿಯಲ್ಲಿ ನಡೆದಿದೆ. ಲಕ್ಷ್ಮಮ್ಮ ಪತಿಯಿಂದಲೇ ದಾರುಣವಾಗಿ ಕೊಲೆಯಾದ ಮಹಿಳೆಯಾಗಿದ್ದು, ಪತಿ ವೆಂಕಟಸ್ವಾಮಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಅವರಿಗೆ ಮದುವೆಯನ್ನೂ ಮಾಡಿ ಮುಗಿಸಿದ್ದರು. ದಂಪತಿ ನಡುವೆ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆಯಾಗಿದ್ದು, ಪತ್ನಿಯನ್ನ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಬಳಿಕ ವಿಷ ಸೇವಿಸಿ ಪತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಅಕ್ಕಪಕ್ಕದ ಮನೆಯ ನಿವಾಸಿಗಳು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಸರ್ಜಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.