ಪತ್ನಿಯ ಅಶ್ಲೀಲ ವಿಡಿಯೋ ಮಾವನಿಗೆ ಕಳಿಸಿದ ! ಮುಂದೇನಾಯ್ತು?

ಬುಧವಾರ, 1 ಜೂನ್ 2022 (12:02 IST)
ಬೆಂಗಳೂರು : ಪತ್ನಿಯನ್ನು ಅಸ್ವಾಭಾವಿಕ ಲೈಂಗಿಕತೆಗೆ ಒತ್ತಾಯಿಸಿದಲ್ಲದೆ, 
 
ಅಶ್ಲೀಲ ಪೋಟೋ ತೆಗೆದು ಆಕೆಯ ತಂದೆ ಮತ್ತು ಸ್ನೇಹಿತರಿಗೆ ಕಳುಹಿಸುವ ಮೂಲಕ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ನಗರದ ಸಾಫ್ಟ್ವೇರ್ ಉದ್ಯೋಗಿ ವಿರುದ್ಧ ಹೆಚ್ಚಿನ ತನಿಖೆ ನಡೆಸಲು ಹೈಕೋರ್ಟ್ ಆದೇಶಿಸಿದೆ.
 
ಪ್ರಕರಣ ಕುರಿತು ಪೊಲೀಸರು ಸಮರ್ಪಕ ತನಿಖೆ ನಡೆಸಿಲ್ಲ ಎಂದು ಆಕ್ಷೇಪಿಸಿ ಸಂತ್ರಸ್ತೆ ಮಹಿಳೆ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.
 
ಪ್ರಕರಣದಲ್ಲಿ 2019ರಲ್ಲಿ ವಿವೇಕನಗರ ಠಾಣಾ ಪೊಲೀಸರು ನಡೆಸಿದ ತನಿಖೆ ಕಳಪೆಯಾಗಿದೆ. ದೂರಿನಲ್ಲಿರುವ ಅಂಶಗಳ ಬಗ್ಗೆ ತನಿಖಾಧಿಕಾರಿಗಳು ಹೆಚ್ಚಿನ ವಿವರ ಸಂಗ್ರಹಿಸಿಲ್ಲ. 
 
ಮಹಿಳೆಯ ತಂದೆಯಿಂದ ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾದ ಮೊಬೈಲ್ ಫೋನ್ನಲ್ಲಿರುವ ವಿಷಯಗಳ ಬಗ್ಗೆ ಆರೋಪ ಪಟ್ಟಿಯಲ್ಲಿ ಉಲ್ಲೇಖಸಿಲ್ಲ. ಅಲ್ಲದೆ, ಪತಿಯ ಸೆಲ್ಫೋನ್ ವಶಪಡಿಸಿಕೊಂಡು ತನಿಖೆ ನಡೆಸಿಲ್ಲ. 
 
ಪ್ರಕರಣದಲ್ಲಿ ಐಪಿಸಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯ ಶಿಕ್ಷಾರ್ಹ ಅಪಾದನೆಗಳನ್ನು ಕೈಬಿಡಲಾಗಿದೆ. ಹಾಗಾಗಿ, ಹೆಚ್ಚಿನ ತನಿಖೆ ನಡೆಸಬೇಕು ಹಾಗೂ ಬೇರೊಬ್ಬ ತನಿಖಾಧಿಕಾರಿಯನ್ನು ನೇಮಿಸಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ