ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಂದ!

ಗುರುವಾರ, 16 ಡಿಸೆಂಬರ್ 2021 (14:23 IST)
ವಿಜಯಪುರ : ಪತ್ನಿ ಶೀಲ ಶಂಕಿಸಿ ಪತ್ನಿಯ ಕತ್ತು ಹಿಸುಕಿ ಪತಿಯೇ ಕ್ರೂರವಾಗಿ ಹತ್ಯೆಗೈದು, ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಆರ್ಎಸ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಹೊರ ಭಾಗದ ಜಮೀನಲ್ಲಿರುವ ಶೆಡ್ಗೆ ಪತ್ನಿಯನ್ನು ಕರೆದುಕೊಂಡು ಹೋಗಿ ಕತ್ತು ಹಿಸುಕಿ ಕೊಲೆ ಗೈದಿದ್ದೇನೆ. ಪತ್ನಿಯ ಹತ್ಯೆಗೈದ ಬಳಿಕ ತಾನು ಕೂಡ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 

ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಶರಣಾದ ವ್ಯಕ್ತಿ ಶಿವಪ್ಪ ಮನಗೂಳಿ (45)ಯಾಗಿದ್ದು, ಹನುಮವ್ವ (38) ಪತಿಯಿಂದ ಕೊಲೆಗೀಡಾದ ಪತ್ನಿಯಾಗಿದ್ದಾರೆ. ಇದೀಗ ಸ್ಥಳಕ್ಕೆ ನಿಡಗುಂದಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ