ನಾಳೆ ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್‌, ಬಿಜೆಪಿಯಲ್ಲಿ ಜಯಮಾಲೆ ಯಾರಿಗೆ?

ಬುಧವಾರ, 12 ಏಪ್ರಿಲ್ 2017 (18:21 IST)
ಮುಂದಿನ ವರ್ಷದ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿರುವ ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯ ಮತದಾನ ಏಣಿಕೆ ನಾಳೆ ಆರಂಭವಾಗಲಿದ್ದು, ಮತದಾರರು ಕಾಂಗ್ರೆಸ್ ಅಥವಾ ಬಿಜೆಪಿಗೆ ಮಣೆಹಾಕಿದ್ದಾರೆಯೇ ಎನ್ನುವುದು ಬಹಿರಂಗವಾಗಲಿದೆ.   
 
ಉಭಯ ಪಕ್ಷಗಳು ಉಪಚುನಾವಣೆಯನ್ನು ಪ್ರತಿಷ್ಠೆಯ ವಿಷಯವಾಗಿಸಿದ್ದರಿಂದ ಚುನಾವಣೆಯಲ್ಲಿ ಭಾರಿ ಅಬ್ಬರದ ಪ್ರಚಾರಕ್ಕೆ ಮೊರೆಹೋಗಿದ್ದವು.  
 
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟದ ದಂಡು ಕಾಂಗ್ರೆಸ್ ಪರವಾಗಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ದಂಡು ಬಿಜೆಪಿ ಪರವಾಗಿ ಪ್ರಚಾರ ನಡೆಸಿತ್ತು.
 
ಗುಂಡ್ಲುಪೇಟೆಯಲ್ಲಿ ಹಾಲಿ ಶಾಸಕರಾಗಿದ್ದ ಎಚ್‌.ಎಸ್.ಮಹಾದೇವ್ ಪ್ರಸಾದ್ ನಿಧನ ಹೊಂದಿದ್ದರಿಂದ ಮತ್ತು ಸಚಿವ ಸ್ಥಾನದಿಂದ ಕೈಬಿಟ್ಟಿದ್ದಾರೆ ಎಂದು ಆರೋಪಿಸಿ ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ಎದುರಾಗಿತ್ತು. 
 
ನಾಳೆ ಬೆಳಿಗ್ಗೆ 8 ಗಂಟೆಗೆ ಮತದಾನ ಏಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಬರುವ ನಿರೀಕ್ಷೆಯಿದೆ. ನಂಜನಗೂಡಿನಲ್ಲಿ ಜೆಎಸ್‌ಎಸ್ ಕಾಲೇಜಿನಲ್ಲಿ ಮತಏಣಿಕೆ ಕಾರ್ಯ ನಡೆಯಲಿದ್ದರೆ, ಗುಂಡ್ಲುಪೇಟೆಯಲ್ಲಿ ಸೇಂಟ್ ಜೋನ್ಸ್ ಶಾಲೆಯಲ್ಲಿ ಮತ ಏಣಿಕೆ ಕಾರ್ಯ ನಡೆಯಲಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ