ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಎಂಪಿ ರೇಣುಕಾಚಾರ್ಯ?

ಮಂಗಳವಾರ, 19 ಸೆಪ್ಟಂಬರ್ 2023 (10:28 IST)
ದಾವಣಗೆರೆ : ಎಂಪಿ ರೇಣುಕಾಚಾರ್ಯ ಅವರು ಭಾರತೀಯ ಜನತಾ ಪಾರ್ಟಿಗೆ ಗುಡ್ ಬೈ ಹೇಳ್ತಾರಾ ಅನ್ನೋ ಅನುಮಾನವೊಂದು ಇದೀಗ ಎದ್ದಿದೆ.
 
ರೇಣುಕಾಚಾರ್ಯ ಅವರು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಮನೆಗೆ ಭೇಟಿ ನೀಡಿ ಸಂಚಲನ ಮೂಡಿಸಿದ್ದಾರೆ. ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೆ ಶಾಮನೂರು ಮನೆಗೆ ಕೂಡ ದಿಢೀರ್ ಭೇಟಿಯಾಗಿದ್ದಾರೆ. ಎಸ್ ಎಸ್ ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪ ಜೊತೆ ರಹಸ್ಯ ಮಾತುಕತೆ ನಡೆಸಿದ್ದು, ಈ ಮೂಲಕ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗುತ್ತಾ ಅನ್ನೋ ಪ್ರಶ್ನೆ ಮೂಡಿದೆ. 

ಇತ್ತೀಚೆಗೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಸೇರ್ಪಡೆಗೆ ಮುಕ್ತ ಆಹ್ವಾನ ನೀಡಿದ್ದರು. ರೇಣುಕಾಚಾರ್ಯ ಅಡ್ಡಗೋಡೆ ಮೇಲೆ ದೀಪ ಇಡುತ್ತಿದ್ದಾರೆ. ಬಿಜೆಪಿಯಲ್ಲಿ ಹಲವರು ಬೇಸತ್ತು ಹೋಗಿದ್ದಾರೆ. ಅದರಲ್ಲೂ ಅವರಿಂದ (ಜಿ ಎಂ ಸಿದ್ದೇಶ್ವರ್ ಫ್ಯಾಮಿಲಿ) ರೋಸಿ ಹೋಗಿ ಕಾಂಗ್ರೆಸ್ ಗೆ ಬರುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ