ಮತ್ತೆ ದೇಶದ ಪ್ರಧಾನಿ ಆಗ್ತಾರಾ ನರೇಂದ್ರ ಮೋದಿ..?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ, ದೇಶದ 26 ವಿರೋಧ ಪಕ್ಷಗಳ ಇಂಡಿಯಾ ಬಣವು ಹೇಗಾದ್ರೂ ಈ ಬಾರಿ ಚುನಾವಣೆ ಗೆಲ್ಲಲೇಬೇಕು ಎಂದು ಭರ್ಜರಿ ತಯಾರಿ ನಡೆಸಿಕೊಂಡಿವೆ. ಅದರಲ್ಲೂ ಇಂಡಿಯಾ ಕೂಟ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಈ ಮಧ್ಯೆ ರಾಷ್ಟ್ರೀಯ ಸುದ್ದಿವಾಹಿನಿಯೊಂದು ನಡೆಸಿರೋ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಈ ಬಾರಿ ಕೂಡ ನರೇಂದ್ರ ಮೋದಿಯವರೇ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದೆ.