ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ಸೇರ್ಪಡೆಯಾಗುವುದಿಲ್ಲ: ಡಿ ವಿ ಸದಾನಂದ ಗೌಡ
ಈಚೆಗೆ ಬಿಜೆಪಿ ಬೆಂಗಳೂರು ಉತ್ತರದಿಂದ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರವನ್ನು ವ್ಯಕ್ತಪಡಿಸಿದ್ದರು. ಅದಲ್ಲದೆ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆಂಬ ಸುದ್ದಿ ಕಳೆದೆರಡು ದಿನಗಳಲ್ಲಿ ಜೋರಾಗಿತ್ತು.
ಇದೀಗ ಈ ಎಲ್ಲ ಗೊಂದಲ್ಲಕ್ಕೆ ಡಿವಿ ಸದಾನಂದ ಗೌಡ ಅವರು ಪ್ರತಿಕ್ರಿಯಿಸಿದ್ದಾರೆ. ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಎನ್‌ಡಿಎ ಅವಧಿಯಲ್ಲಿ ರೈಲ್ವೇ, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಡಿವಿ ಸದಾನಂದಗೌಡ ಕಾರ್ಯನಿರ್ವಹಿಸಿದ್ದಾರೆ.