ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ ಬಹುಮತ ಬಂದರೆ ಮಾತ್ರ ಆಡಳಿತ ನಡೆಸುತ್ತೇವೆ. ಇಲ್ಲದಿದ್ದರೆ ಮುಲಾಜಿಲ್ಲೇ ವಿಪಕ್ಷ ಸ್ಥಾನದಲ್ಲಿ ಕೂರುವುದಾಗಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ನಡೆದ ಗಾಂಧಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರಕ್ಕೇರುವ ಆಲೋಚನೆ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಜಾಹೀರಾತುಗಳ ಮೂಲಕ ಜನರನ್ನು ಮರುಳು ಮಾಡುತ್ತಿದೆ. ಜನರ ಹಣ ದುಂದು ವೆಚ್ಚ ಮಾಡುತ್ತಿವೆ. ಇದಕ್ಕೆಲ್ಲಾ ಜನರೇ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ