ಮಹದಾಯಿ ಹೋರಾಟಕ್ಕೆ ನಾಂದಿ ?

ಬುಧವಾರ, 29 ಜೂನ್ 2022 (10:27 IST)
ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದ ಜನರ ಕನಸಿನ ಕೂಸಾಗಿರುವ ಮಹದಾಯಿ ನೀರು ಸದ್ಬಳಕೆ ಆಸೆಯಾಗಿಯೇ ಉಳಿದಿದೆ.
 
ಹೆಸರಿಗೆ ಮಾತ್ರ ಯೋಜನೆ ಅನುಷ್ಠಾನಕ್ಕೆ ಸಾವಿರಾರು ಕೋಟಿ ಅನುದಾನ ಮೀಸಲಿಟ್ಟಿರುವ ಸರ್ಕಾರ, ಕಾಮಗಾರಿಯನ್ನು ಮಾತ್ರ ಇನ್ನೂ ಆರಂಭಿಸಿಲ್ಲ.

ಇದೀಗ ಯೋಜನೆ ಶೀಘ್ರ ಅನುಷ್ಠಾನಕ್ಕೆ ರೈತರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಈ ಮೂಲಕ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.

ಮಹದಾಯಿ ಯೋಜನೆಗಾಗಿ ಕಳೆದ 3 ಬಜೆಟ್ಗಳಲ್ಲಿ ಒಂದೂವರೆ ಸಾವಿರಕ್ಕೂ ಅಧಿಕ ಕೋಟಿ ಅನುದಾನವನ್ನು ಘೋಷಣೆ ಮಾಡಲಾಗಿದೆ. ಇದು ಕೇವಲ ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸವಾಗಿದ್ದು, ಕಾಮಗಾರಿ ಆರಂಭಕ್ಕೆ ಯಾರು ಕೂಡ ಮುಂದಾಗುತ್ತಿಲ್ಲ.

ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಬಜೆಟ್ನಲ್ಲಿ ಮಹದಾಯಿ ಕಾಮಗಾರಿಗಾಗಿ 500 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದರು. ಈಗಿನ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಸಾಕಷ್ಟು ಭರವಸೆಯ ಮಾತುಗಳನ್ನಾಡಿ, ಬಜೆಟ್ನಲ್ಲಿ 1,000 ಕೋಟಿ ರೂ. ಮೀಸಲಿಟ್ಟಿದ್ದಾರೆ.
ಈಗಾಗಲೇ 3 ಹಂತದಲ್ಲಿ ಕೇಂದ್ರ ಹಾಗೂ ರಾಜ್ಯ ಬಜೆಟ್ನಲ್ಲಿ ಅನುದಾನ ಘೋಷಣೆ ಮಾಡಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ