ಮಹಿಳೆಯ ಅಪಹರಣ ಪ್ರಕರಣ: ದೋಷರೋಪಟ್ಟಿಯಲ್ಲಿ ಭವಾನಿ ರೇವಣ್ಣ ಪಾತ್ರದ ಬಗ್ಗೆ ಉಲ್ಲೇಖ
ರೇವಣ್ಣ ಸೂಚನೆ ಮೇರೆಗೆ ಮಹಿಳೆ ಅಪಹರಣ ಮಾಡಲಾಗಿತ್ತು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಪಾತ್ರವೂ ಇದೆ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಆರೋಪದ ಮೇಲೆ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದರು. ಹೆಚ್.ಡಿ ರೇವಣ್ಣ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.