ಮಹಿಳೆ ಮೇಲೆ ಊಬರ್ ಚಾಲಕನಿಂದ ಹಲ್ಲೆ!

ಗುರುವಾರ, 10 ಆಗಸ್ಟ್ 2023 (08:05 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಊಬರ್ ಚಾಲಕ ಹಲ್ಲೆ ಮಾಡಿದ ಘಟನೆ ನಡೆದಿದೆ.
 
ಬೆಳ್ಳಂದೂರು ಬಳಿಯ ಬೋಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ತನ್ನ ಮಗನನ್ನು ಅಸ್ಪತ್ರೆಗೆ ಕರೆದೊಯ್ಯಲು ಕ್ಯಾಬ್ ಬುಕ್ ಮಾಡಿದ್ದರು. ಅಂತೇಯೇ ಬುಕ್ ಮಾಡಿದ್ದ ಸ್ಥಳಕ್ಕೆ ಮತ್ತೊಂದು ಕ್ಯಾಬ್ ಬಂದಿದೆ. ಆದರೆ ಇದನ್ನು ಗಮನಿಸಿದ ಮಹಿಳೆ ಮತ್ತು ಮಗ ಕ್ಯಾಬ್ ಹತ್ತಿ ಕುಳಿತರು. ಈ ವೇಳೆ ಇದು ಬೇರೆ ಕ್ಯಾಬ್ ಎಂದು ಹೇಳಿ ಇಬ್ಬರು ವಾಹನದಿಂದ ಇಳಿಯಲು ಯತ್ನಿಸಿದ್ದಾರೆ.

ಮಹಿಳೆ ಮತ್ತು ಮಗ ಇಳಿಯುತ್ತಿದ್ದಂತೆಯೇ ಚಾಲಕ ಕ್ಯಾಬ್ ಚಲಾಯಿಸಲು ಮುಂದಾಗಿದ್ದಾನೆ. ಆಗ ಕ್ಯಾಬ್ ಚಾಲಕ ಮತ್ತು ಮಹಿಳೆಯ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆಯುತ್ತಿದ್ದಂತೆಯೇ ಚಾಲಕ ಕ್ಯಾಬ್ ನಿಲ್ಲಿಸಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ