ವೈದ್ಯರ ಎಡವಟ್ಟು: ಕಿವಿ ಶಸ್ತ್ರಚಿಕಿತ್ಸೆಗೆ ಬಂದ ಮಹಿಳೆ ಸಾವು

ಮಂಗಳವಾರ, 22 ಮಾರ್ಚ್ 2022 (10:53 IST)
ಗದಗ: ಕಿವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ‍್ಳಲು ಆಸ್ಪತ್ರೆಗೆ ಬಂದಿದ್ದ ಮಹಿಳೆ ವೈದ್ಯರ ಎಡವಟ್ಟಿನಿಂದಾಗಿ ಸಾವನ್ನಪ್ಪಿದ ಘಟನೆ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಕಿವಿ ತೂತು ಸರಿಪಡಿಸಿಕೊಳ್ಳಲು ಶಸ್ತ್ರಚಿಕಿತ್ಸೆಗೆ ಬಂದಿದ್ದ ಮಹಿಳೆಗೆ ವೈದ್ಯರು ಇಂಜೆಕ್ಷನ್ ಕೊಟ್ಟಿದ್ದಾರೆ. ಈ ಇಂಜಕ್ಷನ್ ನಲ್ಲಿ ಪ್ರಮಾದವಾಗಿದೆ ಎಂಬುದು ಕುಟುಂಬಸ್ಥರ ಆರೋಪ.

ಆರಾಮವಾಗಿದ್ದ ಪತ್ನಿ ಸಾವನ್ನಪ್ಪಿದ್ದರಿಂದ ತೀವ್ರ ದುಃಖಿತನಾದ ಪತಿ ಸ್ಥಳದಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ತನಗೆ ನ್ಯಾಯ ಸಿಗಬೇಕು ಎಂದು ಗೋಳಾಡಿದ್ದಾನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ