ವಯಸ್ಕರ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ

ಮಂಗಳವಾರ, 5 ಜುಲೈ 2016 (15:45 IST)
ಜಿಲ್ಲಾ ವಯಸ್ಕರ ಇಲಾಖೆಯಲ್ಲಿ ವಿಭಾಗದ ಅಧಿಕಾರಿಯೊಬ್ಬರು ಮಹಿಳಾ ಅಧಿಕಾರಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
 
ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಪಿ.ಬಡಿಗೇರ ತಮಗೆ ಮಾನಸಿಕ ಮತ್ತು ಲೈಗಿಂಕ ಕಿರುಕುಳ ನೀಡುತ್ತಿದ್ದಾರೆ ಎಂದು ಅದೇ ಇಲಾಖೆಯ ಮಹಿಳಾ ಅಧಿಕಾರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
 
ಕಳೆದ ಆರು ತಿಂಗಳಿನಿಂದ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಪ್ರಭಾರಿ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಕಛೇರಿಯಲ್ಲಿ ತಮಗೆ ಲೈಗಿಂಕ ಕಿರುಕುಳ ಮತ್ತು ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ