ಮಹಿಳೆ ಕಿಡ್ನ್ಯಾಪ್ ಪ್ರಕರಣ: ಎಚ್‌ಡಿ ರೇವಣ್ಣಗೆ ಬಿಗ್ ರಿಲೀಫ್

Sampriya

ಬುಧವಾರ, 28 ಆಗಸ್ಟ್ 2024 (18:42 IST)
ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಇದರಿಂದ ರೇವಣ್ಣಗೆ ಬಿಗ್‌ ರಿಲೀಫ್ ಸಿಕ್ಕಿದೆ.

ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂದ ಸಂತ್ರಸ್ತೆಯ ಅಪಹರಣಕ್ಕೆ ಸಂಬಂಧಿಸಿದಂತೆ  ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್​ ನೀಡಿದ್ದ ಜಾಮೀನು ರದ್ದು ಕೋರಿ ಎಸ್​​ಐಟಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿ ವಿಚಾರಣೆಯನ್ನು  ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ನಡೆಸಿ ರೇವಣ್ಣ ಜಾಮೀನು ರದ್ದಗೊಳಿಸಲು ನಿರಾಕರಿಸಿದೆ. ಅಲ್ಲದೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿಗೆ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ರೇವಣ್ಣ ಪತ್ನಿ ಭವಾನಿ ಕೂಡ ಈಗಾಗಲೇ ಜಾಮೀನು ಪಡೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ