ಬೆಂಗಳೂರು: ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ; ಮಹಿಳೆಯೊಬ್ಬರ ಅಪಹರಣದ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರುನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
ಈ ಕುರಿತ ಅರ್ಜಿಯನ್ನು ಮಧ್ಯಾಹ್ನ 3 ಗಂಟೆಯಿಂದ 4.30ರವರೆಗೂ ವಿಚಾರಣೆ ಅಲಿಸಿ ಕಾಯ್ದಿರಿಸಿದ್ದ ಆದೇಶವನ್ನು 'ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಸಂಜೆ 6.23ಕ್ಕೆ ಪ್ರಕಟಿಸಿದರು.
ಎಚ್ ಡಿ ದೇವೇಗೌಡರ ಅವರ ನಿವಾಸದಲ್ಲಿ ರೇವಣ್ಣ ಅವರನ್ನು ಬಂಧಿಸಲಾಗಿದೆ.