ಅಹೋರಾತ್ರಿ ಧರಣಿ ಕುಳಿತ ಮಹಿಳಾ ಕಾರ್ಯಕರ್ತೆಯರು

ಗುರುವಾರ, 9 ಆಗಸ್ಟ್ 2018 (14:06 IST)
ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಪದೇ ಪದೇ ಪ್ರತಿಭಟನೆ ಮಾಡ್ತಾನೇ ಬರ್ತಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು, ಸರ್ಕಾರ ಇದುವರೆಗೂ ಅವರ ಬೇಡಿಕೆಗೆ ಸ್ಪಂದಿಸಿಲ್ಲ. ಹೀಗಾಗಿ ಮತ್ತೆ ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಆಶಾಕಾರ್ಯಕರ್ತೆಯರು ಜಿಲ್ಲಾಡಳಿತ ಭವನ ಮುಂದೆ ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಈಡೇರಿಸುವಂತೆ ಒತ್ತಾಯಿಸಿ ಅಹೋ ರಾತ್ರಿ ಪ್ರತಿಭಟನೆ ಆರಂಭಿಸಿದ್ದಾರೆ.

ಹಲವು ತಿಂಗಳಿಂದ ಬಾಕಿ ಇರುವ ಪ್ರೋತ್ಸಾಹ ಧನ ನೀಡಬೇಕು, ನಿರಂತರವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರ ಹಣ ಕಡಿತ ಮಾಡದೇ ಸಂಪೂರ್ಣ ಗೌರವಧನ ನೀಡುವುದು. ಯಾವುದೇ ಸಭೆ, ತರಬೇತಿ ಮತ್ತಿತರ ಚಟುವಟಿಕೆಗಳಲ್ಲಿ ಆಶಾ ಕಾರ್ಯಕರ್ತೆಯರು ಭಾಗಿಯಾಗಿದ್ರೆ ಟಿಎ ಮತ್ತು ಡಿಎ ನೀಡಬೇಕು ಎಂಬಿತ್ಯಾದಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ಮುಂದುವರಿಸಿದ್ದಾರೆ.

 



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ