ತನ್ನ ಗಂಡನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಮಹಿಳೆಯೊಬ್ಬರನ್ನ ಮತ್ತೊಬ್ಬ ಮಹಿಳೆ ಬೆತ್ತಲೆಗೊಳಿಸಿ ಥಳಿಸಿರುವ ಅಮಾನುಷ ಘಟನೆ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಮಹಿಳೆ ಹಲ್ಲೆ ಮಾಡಿದ ಪತಿಗೆ 30 ಸಾವಿರ ರೂಪಾಯಿ ಸಾಲ ನೀಡಿದ್ದರು. ಸಾಲದ ಹಣ ವಾಪಸ್ ಪಡೆಯಲು ಹೋದ ಬಲವಂತವಾಗಿ ಬೆತ್ತಲೆಗೊಳಿಸಿ ಅಕ್ರಮ ಸಂಬಂಧದ ಆರೋಪ ಹೊರಿಸಿ ಹಲ್ಲೆ ಸಡೆಸಿದ್ದಾರೆ ಎಂದು ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ.
ನಾಗರೀಕ ಸಮಾಜವೇ ತಲೆತಗ್ಗಿಸುವಂಥಾ ಈ ಘಟನೆ ವಿರುದ್ಧ ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಇಂಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಹಲ್ಲೆ ನಡೆಸಿದ 9 ಮಂದಿ ಬಂಧನಕ್ಕೆ ಆದೇಶಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ