ಅಂತರ ಕಾಲೇಜು ಮಹಿಳೆಯರ ಖೋ-ಖೋ ಪಂದ್ಯಾವಳಿ

ಬುಧವಾರ, 19 ಸೆಪ್ಟಂಬರ್ 2018 (21:02 IST)
ಬೆಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ಖೋ-ಖೋ ಪಂದ್ಯಾವಳಿ ನಡೆಯುತ್ತಿದೆ. ಪ್ರಶಸ್ತಿಗಾಗಿ 22 ತಂಡಗಳ ನಡುವೆ ಸೆಣಸಾಟ ನಡೆಯಲಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ವಿಭಾಗದ ಖೋ ಖೋ ಪಂದ್ಯಾವಳಿ ನಡೆಯುತ್ತಿದೆ.  ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಚಾಲನೆ ನೀಡಲಾಯಿತು. ಕ್ರೀಡಾಕೂಟವನ್ನು ರಾಷ್ಟ್ರೀಯ ಖೋ ಖೋ ಆಟಗಾರ್ತಿ ಪ್ರಖ್ಯಾತ ವೈದ್ಯರಾದ ಡಾ.ಶಾಂತಲಾ ತುಪ್ಪಣ್ಣ ಗಿಡಕ್ಕೆ ನೀರನ್ನು ಹಾಕುವ ಮೂಲಕ ಉದ್ಘಾಟಿಸಿದರು. ಇನ್ನೂ 2 ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಗೆ ಒಳಪಡುವ 22 ಕಾಲೇಜಿನ ತಂಡಗಳು ಸ್ಪರ್ಧೆಯಲ್ಲಿ ಭಾಗಿಯಾಗಿವೆ. ಇಲ್ಲಿ ವಿಜೇತರಾಗುವ ತಂಡ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ. ಇಂದಿನ ವೇಗದ ಯುಗದಲ್ಲಿ ಯುವ ಪೀಳಿಗೆ ಕ್ರೀಡೆಗಳ ಬಗ್ಗೆ ಆಸಕ್ತಿ ತೋರುವವರ ಸಂಖ್ಯೆ ಕೂಡ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ. ಪೋಷಕರು ಮಕ್ಕಳಿಗೆ ಹೆಚ್ಚು ಪ್ರೋತ್ಸಾಹ ನೀಡಿದಾಗ ಮಾತ್ರ ಅವರಲ್ಲಿ ಕ್ರೀಡಾಸಕ್ತಿ ಬೆಳೆಯುತ್ತದೆ.

ಅಲ್ಲದೇ ಆಟೋಟಗಳಲ್ಲಿ ಪಾಲ್ಗೊಂಡಾಗ ಏಕಾಗ್ರತೆ, ಓದಿನ ಬಗ್ಗೆ ಆಸಕ್ತಿ, ನಿರ್ಧಾರ ಕೈಗೊಳ್ಳುವಿಕೆ ಮತ್ತು ಸಮಯ ಪಾಲನೆಯಂತಹ ಧನಾತ್ಮಕ, ಗುಣಗಳು ವಿದ್ಯಾರ್ಥಿಗಳಲ್ಲಿ ಮೂಡಲು ಸಹಕಾರಿಯಾಗುತ್ತದೆ ಎಂದು ಡಾ.ಶಾಂತಲಾ ತುಪ್ಪಣ್ಣ ಕಾಲೇಜು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ