ಮಹಿಳೆಯರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಲೋಕಸಭೆ ಸಭಾಪತಿ

ಶುಕ್ರವಾರ, 6 ಜನವರಿ 2017 (14:17 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ರಕ್ಷಣೆ ಎಲ್ಲರ ಜವಾಬ್ದಾರಿಯಾಬೇಕಿದೆ ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲದೆ ಬೇರೆಡೆಯೂ ನಡೆದಿವೆ. ಗ್ರಾಮೀಣ ಪ್ರದೇಶದಲ್ಲಿಯೂ ಸಹ ಇಂತಹ ಪ್ರಕರಣಗಳು ಕಂಡು ಬಂದಿವೆ. ಮಹಿಳೆಯರನ್ನು ಗೌರವಿಸುವುದನ್ನು ಮಕ್ಕಳಿಗೆ ಕಲಿಸಿಕೊಡುವುದು ಅವಶ್ಯವಾಗಿದೆ ಎಂದರು.
 
ನಮ್ಮೆಲರ ಮನಸ್ಥಿತಿಗಳು ಬದಲಾಗಬೇಕಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುಲು ಸರಕಾರ ಹಾಗೂ ಪೊಲೀಸ್ ಇಲಾಖೆ ಶ್ರಮಿಸಿದರೆ ಸಾಲದು. ಬದಲಾಗಿ ಜನತೆಯೂ ಸಹ ಶ್ರಮಿಸಬೇಕಿದೆ ಎಂದು ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಕರೆ ನೀಡಿದ್ದಾರೆ.
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರು ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ