ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

Sampriya

ಗುರುವಾರ, 2 ಅಕ್ಟೋಬರ್ 2025 (15:21 IST)
ಮೈಸೂರು: ನಾಡಹಬ್ಬ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ ಸೇರಿ 150ಕ್ಕೂ ಕಲಾತಂಡಗಳು ಕಣ್ಮನ ಸೆಳೆಯುತ್ತಿವೆ.

ಮೆರವಣಿಗೆಯಲ್ಲಿ 58 ಟ್ಯಾಬ್ಲೋಗಳು ನಾನಾ ಸಂದೇಶವನ್ನು ಸಾರುತ್ತಿವೆ.  31 ಜಿಲ್ಲೆಗಳು ಹಾಗೂ ವಿವಿಧ ಇಲಾಖೆಗಳು ಸೇರಿದಂತೆ 58 ಟ್ಯಾಬ್ಲೋಗಳು ಮೆರವಣಿಗೆಯ ರಂಗು ಹೆಚ್ಚಿಸಿವೆ. ಮೆರವಣಿಗೆಯಲ್ಲಿ 150ಕ್ಕೂ ಅಧಿಕ ಕಲಾತಂಡಗಳು ಪಾಲ್ಗೊಳ್ಳಲಿದ್ದು, ಜಂಬೂಸವಾರಿಯಲ್ಲಿ ಭಾಗಿಯಾಗಲು ಕಾತುರದಿಂದ ಕಾಯುತ್ತಿವೆ.

ಜಂಬೂ ಸವಾರಿ ಹಿನ್ನೆಲೆ ಮೈಸೂರಿನಾದ್ಯಂತ ಬಿಗಿಭದ್ರತೆ ಮಾಡಿಕೊಳ್ಳಲಾಗಿದೆ. ವಿವಿಧ ಜಿಲ್ಲೆಗಳಿಂದ ಪೊಲೀಸ್ ಪಡೆ ಆಗಮಿಸಿದೆ. ನಗರದಾದ್ಯಂತ 9 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಚಿತ್ರದುರ್ಗ, ಚಿಕ್ಕಮಗಳೂರು, ಕೊಪ್ಪಳ, ಬೆಳಗಾವಿಯಿಂದ ಗರುಡ ಪಡೆ, ಶ್ವಾನದಳ, ಬಾಂಬ್ ಸ್ಕ್ವಾಡ್ ಪೊಲೀಸ್ ಸರ್ಪಗಾವಲಿನಲ್ಲಿದೆ.

ಜಂಬೂಸವಾರಿ ಸಾಗುವ ಮಾರ್ಗದ ಉದ್ದಕ್ಕೂ ಭಾರಿ ಬಿಗಿ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗಿದ್ದು, ಅರಮನೆ ಸುತ್ತಮುತ್ತ ಹಾಗೂ ಅಂಬಾರಿ ಸಾಗುವ ಮಾರ್ಗದಲ್ಲಿ ಹೆಚ್ಚುವರಿ ಸಿಸಿಟಿವಿ ನಿಯೋಜನೆ ಮಾಡಲಾಗಿದೆ. ಬನ್ನಿಮಂಟಪ ಸೇರಿದಂತೆ ರಾಜಮಾರ್ಗಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. 

ಮೆರವಣಿಗೆಗೂ ಮುನ್ನಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಮಧ್ಯಾಹ್ನ 1ರಿಂದ 1.18ರ ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ವೇಳೆ ಸಿಎಂ ಈಡುಗಾಯಿ ಒಡೆದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ