ಖಾಸಗಿ ವಾಹನಗಳ ಮೇಲೆ ಬರೆಸಲಾಗುತ್ತಿರುವ ಹೆಸರು, ಚಿನ್ಹೆ ವಿರುದ್ಧ ಜಿಲ್ಲಾಧಿಕಾರಿ ಖಡಕ್ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಖಾಸಗಿ ವಾಹನಗಳ ಮೇಲೆ ಸರ್ಕಾರಿ ಸಂಸ್ಥೆಗಳ ಹೆಸರನ್ನು ಅದರಲ್ಲಿಯೂ ಮುಖ್ಯವಾಗಿ ಮಾನವ ಹಕ್ಕುಗಳ ಆಯೋಗ, ಮತ್ತಿತರ ಸರ್ಕಾರಿ ಸಂಸ್ಥೆಗಳ ಹೆಸರನ್ನು ಅನಧೀಕೃತವಾಗಿ ಅಳವಡಿಸಬಾರದು. ಹೀಗಂತ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ತಮ್ಮ ವಾಹನಗಳ ಮೇಲೆ ಅನಧಿಕೃತವಾಗಿ ಹೆಸರು ಹಾಗೂ ನಾಮಫಲಕವನ್ನು ಅಳವಡಿಸಿದ ಸಂಘ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ರಾಜಕೀಯ ವ್ಯಕ್ತಿಗಳು 7 ದಿನಗಳೊಳಗಾಗಿ ನಾಮ ಫಲಕವನ್ನು ತೆರವುಗೊಳಿಸಬೇಕು. ಇಲ್ಲವಾದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೀಗಂತ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.