ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಬಿಜೆಪಿಗೆ ದೊಡ್ಡಪೆಟ್ಟು ಬಿದ್ದಿದೆ : ರೇಣುಕಾಚಾರ್ಯ

ಮಂಗಳವಾರ, 16 ಮೇ 2023 (10:41 IST)
ದಾವಣಗೆರೆ : ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ಬಿಜೆಪಿಗೆ ದೊಡ್ಡಪೆಟ್ಟು ಬಿದಿದ್ದೆ ಎಂದು ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದ್ದು, ಸೋಲೇ ಗೆಲುವಿನ ಮೆಟ್ಟಿಲು. ಕಾಂಗ್ರೆಸ್ ಹಸಿಸುಳ್ಳು ಹೇಳಿ, ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಯಾವ ರೀತಿ ಸರ್ಕಾರ ನಡೆಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ ಎಂದರು.

ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳು ಹಾಗೂ ಮೀಸಲಾತಿ ಗೊಂದಲದಿಂದ ದೊಡ್ಡಪೆಟ್ಟು ಬಿದ್ದಿದೆ. ಉತ್ತಮ ಪ್ರಣಾಳಿಕೆ ನಮ್ಮದಿದ್ದರೂ ತಡವಾಗಿ ಬಿಡುಗಡೆ ಮಾಡಲಾಯಿತು. ಕಾಂಗ್ರೆಸ್ನವರು ಎರಡು ತಿಂಗಳು ಮುಂಚೆ ಪ್ರಣಾಳಿಕೆ ಬಿಡುಗಡೆ ಮಾಡಿ, ಗ್ಯಾರಂಟಿಗಳನ್ನು ನೀಡಿದರು. ಇದರಿಂದ ನಮಗೆ ಹಿನ್ನಡೆಯಾಯ್ತು. ಜೊತೆಗೆ ಎನ್ಪಿಎಸ್, ಓಪಿಎಸ್ ನೌಕರರಿಂದ ಹಿನ್ನೆಡೆಯಾಯ್ತು ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ