ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ
ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರು ಮಂದಿಯ ಆರೋಗ್ಯ ಗಂಭೀರವಾಗಿದ್ದು, ಹಲವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಇನ್ನೂ 20 ಜನ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ತಿಪ್ಪನಟಗಿ ಗ್ರಾಮಕ್ಕೆ ಸುರಪುರ ತಾಲೂಕು ಆರೋಗ್ಯ ಅಧಿಕಾರಿ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.