ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ನಿರತರಾಗಿರುವುದರಿಂದ ಅವರನ್ನು ಬರ ಅಧ್ಯಯನ ತಂಡದಿಂದ ಕೈಬಿಡಲಾಗಿದೆ. ನಮಗೆ ಅವರ ಮೇಲೆ ಯಾವುದೇ ದ್ವೇಷಯಿಲ್ಲ. ನನ್ನ ಬಗ್ಗೆ ಕಂಸ ಎಂದು ಹೇಳಿಕೆ ನೀಡಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಕಂಸ ಯಾರು ಅರ್ಜುನ ಯಾರು ಎಂದು ತಿಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ್ ಅವರ ಆಶೀರ್ವಾದ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಸ್ವತಂತ್ರವಾಗಿ ಬರ ಅಧ್ಯಯನ ನಡೆಸುತ್ತಿದ್ದಾರೆ. ಅದಕ್ಕೆ ನಮ್ಮ ವಿರೋಧ ಇಲ್ಲ. ಅವರು ನಮಗಿಂತ ಹೆಚ್ಚು ಆಸಕ್ತಿಯಿಂದ ಬರ ಅಧ್ಯಯನ ನಡೆಸುತ್ತಿದ್ದಾರೆ. ನಾವು ಸಹ ಅವರಷ್ಟು ಓಡಾಡುತ್ತಿಲ್ಲ ಎಂದರು.