ಬಿಜೆಪಿಗೆ ಇನ್ನೂ ಯಾರೆಲ್ಲಾ ಬರ್ತಾರೆ ಕಾದು ನೋಡಿ ಎಂದ ಯಡಿಯೂರಪ್ಪ
ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪಡೆ ಕುರಿತ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಇನ್ನೂ ಸ್ವಲ್ಪ ದಿನ ಕಾದು ನೋಡಿ. ಇನ್ನೂ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದಿದ್ದಾರೆ.
ಈ ನಡುವೆ ಮಾಜಿ ಸಚಿವ, ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಕೂಡಾ ಇದೇ ರೀತಿ ಮಾತನಾಡಿದ್ದು, ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ ಎಂದಿದ್ದಾರೆ.