ಯಡಿಯೂರಪ್ಪಗೆ ರಾಜ್ಯಾಧ್ಯಕ್ಷ ಸ್ಥಾನದ ಯೋಗ?

ಮಂಗಳವಾರ, 29 ಜುಲೈ 2014 (16:35 IST)
ಬಿಜೆಪಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಜೋಷಿ, ಈಶ್ವರಪ್ಪ ಮತ್ತು ಅಶೋಕ್ ಉಪಸ್ಥಿತರಿದ್ದರು. ಯಡಿಯೂರಪ್ಪ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಕೇಶವ ಕೃಪಾದಲ್ಲಿ ವ್ಯಾಪಕ ಚರ್ಚೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ಚಿಕ್ಕೋಡಿ, ಬಳ್ಳಾರಿ ಗ್ರಾಮಾಂತರ, ಶಿಕಾರಿಪುರ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು.  ಶಿಕಾರಿಪುರ ಕ್ಷೇತ್ರಕತ್ಕೆ .ವೈ. ರಾಘವೇಂದ್ರ, ಚಿಕ್ಕೋಡಿ-ಮಹಾಂತೇಶ ಕವಟಗಿಮಠ, ಬಳ್ಳಾರಿ ಗ್ರಾಮಾಂತರ ಕ್ಷೇತ್ರಕ್ಕೆ ಓಬಳೇಶ್ ಅವರು ಅಭ್ಯರ್ಥಿಗಳಾಗಿ ಬಿಜೆಪಿ ಪಟ್ಟಿ ಬಿಡುಗಡೆ ಮಾಡಿದ್ದು, ಪ್ರಹ್ಲಾದ್ ಜೋಷಿ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದರು.

 ಸದಾನಂದ ಗೌಡ ಅವರಿಗೆ ರೈಲ್ವೆ ಸಚಿವರ ಪ್ರತಿಷ್ಠಿತ ಹುದ್ದೆ ಸಿಕ್ಕಿದ್ದರೂ, ಯಡಿಯೂರಪ್ಪ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿರಲಿಲ್ಲ. ಇದಲ್ಲದೇ ತಾವು ರಾಜ್ಯದಲ್ಲೇ ಬಿಜೆಪಿಗೆ ಸಾರಥ್ಯ ವಹಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಪಕ್ಷವನ್ನು ಬೆಳೆಸಲು ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಚರ್ಚಿಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ವೆಬ್ದುನಿಯಾವನ್ನು ಓದಿ