ಉಪಚುನಾವಣೆಯ ಫಲಿತಾಂಶದ ಬಗ್ಗೆ ಯಡಿಯೂರಪ್ಪ, ಈಶ್ವರಪ್ಪ ರಿಯಾಕ್ಷನ್
ಮತದಾರರ ತೀರ್ಪನ್ನ ಗೌರವಿಸುವುದಾಗಿ ಉಪಚುನಾವಣೆ ಫಲಿತಾಂಶದ ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಬಿಜೆಪಿ ಮುಖಂಡರ ಜೊತೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಸೋಲು ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದಿದ್ದಾರೆ.
ಉಪಚುನಾವಣಾ ಫಲಿತಾಂಶ ಅಚ್ಚರಿ ತಂದಿದೆ. ಪ್ರಚಾರದ ವೇಳೆ ಜನ ನೀಡುತ್ತಿದ್ದ ಸ್ವಾಗತ ನೋಡಿ 2 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ನಾಯಕರ ಜೊತೆ ಈ ಬಗ್ಗೆ ಚರ್ಚೆ ನಡೆಸುವುದಾಗಿ ಈಶ್ವರಪ್ಪ ಹೇಳಿದ್ದಾರೆ.