ನಿನ್ನೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಬಳಿಕ ರಾಜ್ಯ ಬಿಜೆಪಿ ಪಾಳಯದಲ್ಲಿ ಉದ್ಭವಿಸಿರುವ ಭಿನ್ನಾಭಿಪ್ರಾಯ ಶಮಗೊಂಡಿದ್ದು, ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ತಮ್ಮ ವೈಮನಸ್ಸನ್ನು ಮರೆತು ಇಂದು ಒಂದೇ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿದ್ದಾರೆ.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು. ಆದರೆ, ಬ್ರಿಗೇಡ್‌ಗೆ ಬಿ.ಎಸ್.ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.