ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹಾಗೂ ಯಡಿಯೂರಪ್ಪ ಅವರ ಉದ್ದೇಶ ರಾಜ್ಯದಲ್ಲಿ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರುವುದೇ ಆಗಿದೆ. ನಾನು ಪಕ್ಷ ಬಿಡುವುದಿಲ್ಲ. ಹಾಗೇ ಯಡಿಯೂರಪ್ಪ ಅವರು ಪಕ್ಷ ಬಿಡುವುದಿಲ್ಲ ಎಂಬ ನಂಬಿಕೆ ಇದೆ. ಹಿರಿಯ ನಾಯಕರ ಮಾತು ಕೇಳಿ ನಾವಿಬ್ಬರು ಶೀಘ್ರವೇ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೇವಲ ಯಡಿಯೂರಪ್ಪ ಅಷ್ಟೇ ಅಲ್ಲ, ನನ್ನ ಮುಖ ನೋಡಿಯೂ ಜನ ವೋಟ್ ಹಾಕಲ್ಲ. ವ್ಯಕ್ತಿಯನ್ನು ನೋಡಿ ಮತ ಹಾಕುವದಾದರೇ ರಾಜ್ಯದಲ್ಲಿ ಕೆಜೆಪಿ ಸರಕಾರ ಯಾಕೆ ಅಧಿಕಾರಕ್ಕೆ ಬರಲಿಲ್ಲ. ವ್ಯಕ್ತಿಗಿಂತ ಪಕ್ಷವೇ ಮುಖ್ಯ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ಬಿಎಸ್‌ವೈಗೆ ಟಾಂಗ್ ನೀಡಿದರು.