ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿದ ಯದುವೀರ್
ಸಿದ್ದಗಂಗಾ ಶ್ರೀಗಳ ಭೇಟಿಗೆ ಆಗಮಿಸಿದ್ದ ಮೈಸೂರು ಯುವರಾಜ ಯದುವೀರ್ ಸ್ವಾಮೀಜಿಗಳ ಬಗ್ಗೆ ಮಾತನಾಡಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದೆವು. ಹಾಗೇ ಸಿದ್ದಗಂಗಾ ಶ್ರೀಗಳನ್ನು ನೋಡಲು ಬಂದಿದ್ದೇನೆ ಎಂದು ಯದುವೀರ್ ಹೇಳಿದ್ದಾರೆ.
ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಅಂತ ಚಾಮುಂಡೇಶ್ವರಿ ತಾಯಿಯಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದರು.
ಶ್ರೀಗಳು ವಿಶ್ರಾಂತಿಯಲ್ಲಿದ್ದಾರೆ. ಅವರ ಆಶೀರ್ವಾದ ಪಡೆದುಕೊಂಡೆ. ಆದರೆ ಅವರನ್ನು ಎಚ್ಚರಿಸಲು ಹೋಗಲಿಲ್ಲ. ದೂರದಿಂದ ನೋಡಿಕೊಂಡು ಬಂದೆ ಎಂದು ಸಿದ್ದಗಂಗಾ ಶ್ರೀಗಳ ದರ್ಶನ ಬಳಿಕ ಯದುವೀರ್ ಹೇಳಿಕೆ ನೀಡಿದ್ದಾರೆ.