ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಬಾರದು, ಅಲ್ಪಸಂಖ್ಯಾತರ ಅಭಿವೃದ್ಧಿ ಗುರಿ: ಯತೀಂದ್ರ ಸಿದ್ದರಾಮಯ್ಯ

Krishnaveni K

ಬುಧವಾರ, 20 ನವೆಂಬರ್ 2024 (10:56 IST)
ಮೈಸೂರು: ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಬಾರದು, ಅಲ್ಪ ಸಂಖ್ಯಾತರ ಅಭಿವೃದ್ಧಿ ನಮ್ಮ ಗುರಿ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ವಿಧಾನಪರಿಷತ್ ಸದಸ್ಯರಾಗಿರುವ ಯತೀಂದ್ರ ಮೈಸೂರಿನಲ್ಲಿ ನಡೆದಿದ್ದ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಈ ಹೇಳಿಕೆ ನೀಡಿದ್ದಾರೆ. ಹಿಂದೂ ರಾಷ್ಟ್ರ ಅಪಾಯಕಾರಿ ಎಂದು ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಕೂಡಾ ಹೇಳಿದ್ದರು ಎಂದಿದ್ದಾರೆ.

ಕೆಲವರು ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂದು ಹೊರಟಿದ್ದಾರೆ. ಅದಕ್ಕೆ ನಾವು ಅವಕಾಶ ಮಾಡಿಕೊಡಬಾರದು. ಅಲ್ಪ ಸಂಖ್ಯಾತರ ಅಭಿವೃದ್ಧಿ ನಮ್ಮ ಗುರಿ. ಸಂವಿಧಾನಾತ್ಮಕವಾಗಿ ನಿಮಗೆ ಏನು ಸಿಗಬೇಕೋ ಅದನ್ನು ಸಿಗುವಂತೆ ಮಾಡುತ್ತೇವೆ ಎಂದು ಯತೀಂದ್ರ ಭರವಸೆ ನೀಡಿದ್ದಾರೆ.

ಸರ್ಕಾರದ ಮುಂದೆ ನಿಮ್ಮ ಆರು ಬೇಡಿಕೆಗಳನ್ನು ಇಟ್ಟಿದ್ದೀರಿ. ಇದನ್ನು ಹಂತ ಹಂತವಾಗಿ ಪೂರೈಸುವ ಕೆಲಸ ಮಾಡಲಿದ್ದೇವೆ ಎಂದಿದ್ದಾರೆ. ಯತೀಂದ್ರ ಈ ಹಿಂದೆಯೂ ಒಮ್ಮೆ ಇದೇ ರೀತಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು. ಈಗ ಮತ್ತೊಮ್ಮೆ ಅದೇ ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ