ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ: ಅರುಣ್ ಸಿಂಗ್

ಭಾನುವಾರ, 16 ಅಕ್ಟೋಬರ್ 2022 (12:34 IST)
ಹುಬ್ಬಳ್ಳಿ : ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಬಿಜೆಪಿ ಕೋರ್ ಕಮಿಟಿಯಲ್ಲಿ ಇಲ್ಲ. ಅವರ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ಅಲ್ಪಸಂಖ್ಯಾತ ಮೀಸಲಾತಿ ಬಗ್ಗೆ ಬೆಲ್ಲದ್ ಮತ್ತು ಯತ್ನಾಳ್ ಹೇಳಿದ್ದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ನಾವು ಯತ್ನಾಳ್ಗೆ ನೋಟಿಸ್ ಜಾರಿ ಮಾಡಿ ಉತ್ತರ ಪಡೆದಿದ್ದೇವೆ.

ಯತ್ನಾಳ್ ಸ್ವಭಾವವೇ ಹಾಗಿದೆ ಏನೂ ಮಾಡಲು ಆಗಲ್ಲ. ನೋಡೋಣ ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಶೆಟ್ಟರ್ ಅವರನ್ನು ಪಕ್ಷ ಸೈಡ್ಲೈನ್ ಮಾಡಿಲ್ಲ. ಅವರು ಕೋರ್ ಕಮಿಟಿಯಲ್ಲಿದ್ದಾರೆ ಅವರಿಗೂ ಟಿಕೆಟ್ ಸಿಗಲಿದೆ ಎಂದು ಭರವಸೆ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ