ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ; ವಿರೋಧ ವ್ಯಕ್ತಪಡಿಸಿದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಯತ್ನಾಳ್ ತಿರುಗೇಟು
ಸೋಮವಾರ, 2 ಮಾರ್ಚ್ 2020 (11:35 IST)
ಬೆಂಗಳೂರು : ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಯತ್ನಾಳ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುಗೆ ಯತ್ನಾಳ್ ತಿರುಗೇಟು ನೀಡಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೇಳಿಕೆ ವಿಚಾರದ ಬಗ್ಗೆ ಬಿಜೆಪಿ ನಾಯಕರು ಯತ್ನಾಳ್ ಪರವಾಗಿ ಮಾತನಾಡಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ,
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯತ್ನಾಳ್, ಕಟೀಲು ಏಕೆ ವಿರೋಧ ಮಾಡುತ್ತಾರೆ ಎಂಬುದು ಗೊತ್ತಿದೆ. ಅವರ ಬಗ್ಗೆ ಮುಂದೆ ಎ ಸ್ಕೀಂ, ಬಿ ಸ್ಕೀಂನಲ್ಲಿ ಮಾತನಾಡುತ್ತೇನೆ ಎಂದು ಸ್ವಪಕ್ಷಿಯ ನಾಯಕನ ಮೇಲೆ ಕಿಡಿಕಾರಿದ್ದಾರೆ.