ಯಡಿಯೂರಪ್ಪನವರದ್ದು ದುರಂಹಕಾರದ ಪರಮಾವಧಿ: ಸಿಎಂ

ಸೋಮವಾರ, 23 ಮೇ 2016 (18:56 IST)
ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರದ್ದು ದುರಂಹಕಾರದ ಪರಮಾವಧಿ ಎಂದು ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ವಿರುದ್ಧ ಏಕವಚನದಲ್ಲಿ ಟೀಕಾ ಪ್ರಹಾರ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇಶದ ಎಲ್ಲ ರಾಜ್ಯಗಳಲ್ಲೂ ಬಿಜೆಪಿಯ ಸಾಧನೆ ಶ್ಯೂನ್ಯ. ಯಡಿಯೂರಪ್ಪನವರಗಿಂತ ಹತ್ತು ಪಟ್ಟು ನಾನು ಮಾತನಾಡಬಲ್ಲೆ ಆದರೆ ನನಗೆ ಸಂಸ್ಕೃತಿ ಇದೆ. ಅವರಂತಹ ಕೀಳು ಮಟ್ಟದಲ್ಲಿ ರಾಜಕೀಯ ಮಾಡಲು ನಮಗೆ ಬರುವುದಿಲ್ಲ ಎಂದು ಯಡಿಯೂರಪ್ಪ ವಿರುದ್ಧ ಲೇವಡಿ ಮಾಡಿದ್ದಾರೆ.
 
ಯಡಿಯೂರಪ್ಪನವರಂತ ಸಾವಿರ ಜನ ಬಂದರು ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವಿಲ್ಲ. ಯಡಿಯೂರಪ್ಪನವರದ್ದು ದುರಂಹಕಾರದ ಪರಮಾವಧಿ. ಇದೇ ತರಹ ಕೀಳು ಮಟ್ಟದ ಹೇಳಿಕೆಯಿಂದ ರಾಜಕಾರಣ ಮಾಡಿದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

ವೆಬ್ದುನಿಯಾವನ್ನು ಓದಿ