ಕುಮಾರಸ್ವಾಮಿ ತವರು ಜಿಲ್ಲೆಗೆ ಯಡಿಯೂರಪ್ಪ ಬಂಪರ್ ಕೊಡುಗೆ ನೀಡಿದ್ಯಾಕೆ?

ಗುರುವಾರ, 5 ಮಾರ್ಚ್ 2020 (17:30 IST)
ರಾಜ್ಯ ಬಜೆಟ್ ನಲ್ಲಿ ಮಾಜಿ ಸಿಎಂ ತವರು ಜಿಲ್ಲೆಗೆ ಹಾಲಿ ಸಿಎಂ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ರೇಷ್ಮೆ ನಾಡು ರಾಮನಗರ ಜಿಲ್ಲೆಯಲ್ಲಿ ರೇಷ್ಮೆಯ ಉಪ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಜಿಲ್ಲೆಯಲ್ಲಿನ ’ಕಣ್ವ ಫಾರ್ಮ್’ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ರೇಷ್ಮೆ ಹುಳು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಹೀಗಂತ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020-21ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಆಯವ್ಯಯದಲ್ಲಿ ರಾಮನಗರ ಜಿಲ್ಲೆಯಲ್ಲಿ ಪ್ರತಿ ದಿನ 30 ರಿಂದ 32 ಮೆಟ್ರಿಕ್ ಟನ್ ರೇಷ್ಮೆ ಪೊರೆ ಹುಳವನ್ನು ಸಂಸ್ಕರಿಸಲು ಅನುವಾಗುವಂತಹ ರೇಷ್ಮೆ ಹುಳು ಸಂಸ್ಕರಣಾ ಘಟಕವನ್ನು ಸ್ಥಾಪಿಸಲಾಗುವುದು. ಇದರಿಂದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ (ರೀಲರ್) ಅಧಿಕ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

ಇಡೀ ದೇಶದಲ್ಲಿ ’ವಿದ್ಯುತ್ ವಾಹನ ಮತ್ತು ಇಂಧನ ಶೇಖರಣಾ ನೀತಿ’ಯನ್ನು ಘೋಷಿಸಿರುವ ಕರ್ನಾಟಕ ರಾಜ್ಯ ಇದರ ಮೊದಲ ಹಂತವಾಗಿ ರಾಮನಗರದ ಹಾರೋಹಳ್ಳಿಯ 5 ನೇ ಹಂತದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೈಗಾರಿಕಾ ಪ್ರದೇಶದಲ್ಲಿ ʼಎಲೆಕ್ಟ್ರಿಕ್ ವೆಹಿಕಲ್ಸ್ ಮತ್ತು ಎನರ್ಜಿ ಸ್ಟೋರೇಜ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್’ ಅನ್ನು ಸ್ಥಾಪಿಸಲು ಒತ್ತು ನೀಡಿದೆ. ಇದಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು 2020-21ನೇ ಸಾಲಿನ ಆಯವ್ಯಯದಲ್ಲಿ ಒದಗಿಸಲಾಗುತ್ತಿದೆ ಎಂದು ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ