ಯಡಿಯೂರಪ್ಪ ದೋಷಮುಕ್ತರಾಗಿರಬಹುದು, ಆದ್ರೆ, ಭ್ರಷ್ಟಾಚಾರ ನಡೆದಿಲ್ಲವೇ?: ಸಿಎಂ

ಬುಧವಾರ, 26 ಅಕ್ಟೋಬರ್ 2016 (16:29 IST)
ಕಿಕ್ ಬ್ಯಾಕ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ದೊರೆತ ವಿಚಾರಕ್ಕೆ ಸಂಬಂಧಿಸಿದಂತೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮರ್ಡರ್ ಆಗಿರುತ್ತೆ, ಆದರೆ ಸಾಕ್ಷಿ ಇರಲ್ಲ. ಹಾಗಂತ ಆರೋಪಿಗಳು ದೋಷಮುಕ್ತರಾಗುತ್ತಾರೆ. ಆದರೆ, ಮರ್ಡರ್ ಆಗಿರುವುದು ಸುಳ್ಳೇ? ಎಂದು ಲೇವಡಿ ಮಾಡಿದ್ದಾರೆ.  
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ನಿರ್ದೋಷಿ ಎಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿರಬಹುದು. ಆದರೆ, ಭ್ರಷ್ಟಾಚಾರ ನಡೆದಿಲ್ಲ ಎಂದು ನ್ಯಾಯಾಲಯ ಹೇಳಿಲ್ಲ ಎಂದು ಹೇಳಿದರು. 
 
ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಮುಂದಿನ ಸಿಎಂ ಯಾರು ಎಂದು ರಾಜ್ಯದ ಜನತೆ ನಿರ್ಧಾರ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 
 
ಕಿಕ್ ಬ್ಯಾಕ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲಾ ಆರೋಪಿಗಳು ದೋಷಮುಕ್ತರೆಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ