ಈಶ್ವರಪ್ಪರೊಂದಿಗೆ ಸಂಧಾನಕ್ಕೆ ಮುಂದಾದ ಯಡಿಯೂರಪ್ಪ

ಶನಿವಾರ, 11 ಫೆಬ್ರವರಿ 2017 (16:45 IST)
ಬಿಜೆಪಿ ಜಿಲ್ಲಾಧ್ಯಕ್ಷರ ಬದಲಾವಣೆ ಸೇರಿದಂತೆ ಕೆಲವರ ಹುದ್ದೆಗಳನ್ನು ಬದಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೊಂದಿಗೆ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಪರಿಷ್ಕರಣೆ ಮತ್ತು ಬ್ರಿಗೇಡ್‌ಗೆ ಬ್ರೇಕ್ ಹಾಕಬೇಕು ಎನ್ನುವ ಸಂಧಾನಕ್ಕೆ ಯಡಿಯೂರಪ್ಪ ಮತ್ತು ಈಶ್ವರಪ್ಪ ಸಮ್ಮತಿ ಸೂಚಿಸಿದ್ದರು.
 
ಪದಾಧಿಕಾರಿಗಳ ಪರಿಷ್ಕರಣೆಯಾಗುವವರೆಗೆ ಬ್ರಿಗೇಡ್ ಚಟುವಟಿಕೆ ನಿಲ್ಲುವುದಿಲ್ಲ ಎಂದು ಈಶ್ವರಪ್ಪ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ, ಯಡಿಯೂರಪ್ಪ ಸಂಧಾನಕ್ಕೆ ಮುಂದಾಗಿದ್ದಾರೆ.
 
ಮುಂದಿನ ಕೆಲ ದಿನಗಳಲ್ಲಿ ಕೆಲ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಬದಲಿಸಲು ಯಡಿಯೂರಪ್ಪ ಇದೀಗ ಮುಂದಾಗಿದ್ದಾರೆ ಎಂದು ಬಿಜೆಪಿ ಪಕ್ಷದ ಉನ್ನತ ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ