ಮುಂದಿನ ವಾರದಿಂದ ಯಡಿಯೂರಪ್ಪ ರಾಜ್ಯ ಪ್ರವಾಸ ಶುರು

ಶನಿವಾರ, 9 ಸೆಪ್ಟಂಬರ್ 2023 (21:02 IST)
ಮುಂದಿನ ವಾರದಿಂದ ರಾಜ್ಯ ಪ್ರವಾಸ ಪ್ರಾರಂಭಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಬೃಹತ್ ಬಿಜೆಪಿ  ಪ್ರತಿಭಟನಾ ರ್ಯಾಲಿಯಲ್ಲಿ ಈ ಘೋಷಣೆ ಮಾಡಿದರು. “ನಾನು ರಾಜ್ಯವ್ಯಾಪಿ ಪ್ರವಾಸವನ್ನು ಪ್ರಾರಂಭಿಸುವ ಮೊದಲು ಸೆಪ್ಟೆಂಬರ್ 15 ಅಥವಾ 16 ರಂದು ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದೇನೆ. ಅದರ ಮುಂದಿನ ವಾರದಿಂದ ನಾವು ಪಕ್ಷವನ್ನು ಮರುಸಂಘಟಿಸುತ್ತೇವೆ” ಎಂದು ಯಡಿಯೂರಪ್ಪ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ