ಬೈ ಎಲೆಕ್ಷನ್ ಸೋತವರು ಸಚಿವರಾಗೋದಿಲ್ಲ ಎಂದ ಯಡಿಯೂರಪ್ಪ

ಮಂಗಳವಾರ, 17 ಡಿಸೆಂಬರ್ 2019 (19:06 IST)
ರಾಜ್ಯದಲ್ಲಿ ಈಚೆಗೆ ನಡೆದ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುತ್ತದೆ. ಹೀಗಂತ ಸಿಎಂ ಹೊಸ ಬಾಂಬ್ ಹಾಕಿದ್ದಾರೆ.

ಡಿಸೆಂಬರ್ ಅಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗೋದು ಪಕ್ಕಾ ಆಗಿದೆ. ಬೈ ಎಲೆಕ್ಷನ್ ನಲ್ಲಿ ಗೆದ್ದವರನ್ನು ಸಚಿವರನ್ನಾಗಿ ಮಾಡಲಾಗುತ್ತದೆ ಎಂದಿದ್ದಾರೆ.

ಸೋತ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡೋ ಪ್ರಶ್ನೆಯೇ ಇಲ್ಲ. ಮುಂದಿನ ವಾರ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜೊತೆ ಸುದೀರ್ಘ ಚರ್ಚೆ ನಡೆಸಲಾಗುತ್ತದೆ ಅಂತ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ