ರಮೇಶ್ ಜಾರಕಿಹೊಳಿ ಬಿಜೆಪಿಗೆ ಬರೋದು ಗೊತ್ತೇ ಇಲ್ಲ ಎಂದ ಯಡಿಯೂರಪ್ಪ

ಗುರುವಾರ, 25 ಏಪ್ರಿಲ್ 2019 (12:14 IST)
ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಅತೃಪ್ತರ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಬಿಜೆಪಿಗೆ ಬರುವ ವಿಚಾರದ ಬಗ್ಗೆ ನನಗೇ ಮಾಹಿತಿ ಇಲ್ಲ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿ ಅಚ್ಚರಿ ಮೂಡಿಸಿದ್ದಾರೆ.

ರಮೇಶ ಜಾರಕಿಹೊಳಿ ರಾಜೀನಾಮೆ ವಿಷಯದಲ್ಲಿ ನಾನು ತಲೆ ಹಾಕಿಲ್ಲ ಎಂದರು.

ಶಿವಮೊಗ್ಗದಲ್ಲಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಶಿವಮೊಗ್ಗದಲ್ಲಿ ಗೆಲ್ಲುವ ವಾತಾವರಣ ಸ್ಪಷ್ಟವಾಗಿದೆ. ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ವರದಿ ನೀಡಿದ್ದಾರೆ. ಸುಮಾರು ಒಂದುವರೆ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ ಎಂದರು.

ಸಿ.ಎಂ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ದೇವೆಗೌಡರು ಸೇರಿದಂತೆ ಅನೇಕ ನಾಯಕರು ಕ್ಷೇತ್ರಕ್ಕೆ ಬಂದು ಹೋಗಿದ್ದಾರೆ. ಇವರು ಬಂದು ಹೋದ ತಕ್ಷಣ ಫಲಿತಾಂಶ ಬದಲಿಸಲು ಸಾಧ್ಯವಿಲ್ಲ ಎಂದರು.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ