ಯಡಿಯೂರಪ್ಪ – ಸಿದ್ದರಾಮಯ್ಯ ನಡುವೆ ಮೆಗಾಫೈಟ್

ಶನಿವಾರ, 26 ಸೆಪ್ಟಂಬರ್ 2020 (22:22 IST)
ಹಾಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಮೆಗಾಫೈಟ್ ಜೋರಾಗಿ ನಡೆಯುತ್ತಿದೆ.

ಯಡಿಯೂರಪ್ಪರ ಪುತ್ರ ವಿಜಯೇಂದ್ರರ ಮೇಲೆ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಕುರಿತು ಸಿದ್ದರಾಮಯ್ಯ ಸದನದಲ್ಲಿ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡರು.

ಈ ನಡುವೆ ವಿಜಯೇಂದ್ರರನ್ನು ಸಮರ್ಥಿಸಿಕೊಂಡು ಯಡಿಯೂರಪ್ಪ ಮಾತನಾಡಿದರು.
ಇವರಿಬ್ಬರ ನಡುವೆ ನಡೆದ ಜಟಾಪಟಿ, ವಾಗ್ವಾದ ಕುತೂಹಲ ಕೆರಳುವಂತೆ ಮಾಡಿತು.
ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯರ ಪರ ಬ್ಯಾಟಿಂಗ್ ನಡೆಸಿದರು.

ವಿಜಯೇಂದ್ರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಸಿದ್ದರಾಮಯ್ಯ ಆಗ್ರಹ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ