ಸಂತೋಷ ಕುಟುಂಬದವರಿಗೆ ಯಡಿಯೂರಪ್ಪ ಸಾಂತ್ವಾನ

ಶುಕ್ರವಾರ, 2 ಫೆಬ್ರವರಿ 2018 (14:39 IST)
ಈಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.
 
ಪಕ್ಷದವತಿಯಿಂದ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಲಾಯಿತು. ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಲು ಸರ್ಕಾರದ ಮೇಲೆ ಒತ್ತಡ ತರಲಾಗುವುದು. ಪರಿಹಾರ ಹಾಗೂ ಉದ್ಯೋಗ ದೊರಕಿಸಲು ಕೂಡ ಒತ್ತಡ ಹಾಕಲಾಗುವುದು ಎಂದು ಕುಟುಂಬದವರಿಗೆ ಅಭಯ ನೀಡಿದ್ದಾರೆ.
 
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಹಿಂದೂಗಳ ಕೊಲೆಗೆ ಸರ್ಕಾರ ಕುಮ್ಮಕ್ಕು ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸಂತೋಷ ಪಕ್ಕದ ಮನೆಗೆ ಬಂದು ಹೋದ ಸಿದ್ದರಾಮಯ್ಯ ಸೌಜನ್ಯಕ್ಕಾದರೂ ಸಂತೋಷ ಕುಟುಂಬದ ಸದಸ್ಯರನ್ನು ಭೇಟಿ ಮಾಡಿಲ್ಲ. ಇದು ಅವರ ದುರಹಂಕಾರವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ