ಸಿಎಂ ಪಂಥಹ್ವಾನ ನೀಡಿರುವುದು ಮುರ್ಖತನ: ಯಡಿಯೂರಪ್ಪ

ಶುಕ್ರವಾರ, 14 ಜುಲೈ 2017 (13:46 IST)
ಪ್ರಧಾನಿ ನರೇಂದ್ರ ಮೋದಿ ಸಾಧನೆ ಮತ್ತು ತಮ್ಮ ಸಾಧನೆಯ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಪಂಥಹ್ವಾನ ನೀಡಿರುವುದು ಮೂರ್ಖತನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ  ತಿರುಗೇಟು ನೀಡಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ವಿಶ್ವವೇ ಕೊಂಡಾಡುತ್ತಿದೆ. ದೇಶದ ಆರ್ಥಿಕತೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿದ್ದಾರೆ. ಅಂತಹ ಮಹಾನ್ ನಾಯಕನ ಬಗ್ಗೆ ಸಿಎಂ ಚರ್ಚೆ ಮಾಡುತ್ತಾರಂತೆ ಎಂದು ಲೇವಡಿ ಮಾಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವರ ಸಲಹೆಗಾರ ಕೆಂಪಯ್ಯರೊಂದಿಗೆ ಸೇರಿ ಸಂಚು ರೂಪಿಸುತ್ತಿದ್ದಾರೆ. ಕರಾವಳಿ ಗಲಭೆಯನ್ನು ನಿಯಂತ್ರಿಸಲು ಉನ್ನತ ಪೊಲೀಸ್ ಅಧಿಕಾರಿಗೆ ಜವಾಬ್ದಾರಿ ಹೊರಿಸುವುದು ಬಿಟ್ಟು ಕೆಂಪಯ್ಯಗೆ ಅಧಿಕಾರ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಸಿದ್ದರಾಮಯ್ಯ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ನಾಲ್ಕು ವರ್ಷಗಳಿಂದ ರಾಜ್ಯದ ಜನತೆ ಭ್ರಷ್ಟಾಚಾರ, ದುರಾಡಳಿತದಿಂದ ತತ್ತರಿಸಿ ಹೋಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ