ಉಪಚುನಾವಣೆಗಾಗಿ ಮತದಾರರ ಪಡಿತರ ಚೀಟಿ ಪಡೆದು ಹಣ ಹಂಚಿಕೆ: ಬಿಎಸ್‌ವೈ

ಭಾನುವಾರ, 19 ಮಾರ್ಚ್ 2017 (13:04 IST)
ಉಪಚುನಾವಣೆಗಾಗಿ ಮತದಾರರ ಪಡಿತರ ಚೀಟಿ ಪಡೆದು ಹಣ ಹಂಚಿಕೆ ಮಾಡಲಾಗುತ್ತಿದೆ. ಸರಕಾರದ ಹೇಯ ಅಕ್ರಮವನ್ನು ಬಿಜೆಪಿ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ, ಶೀಘ್ರವೇ ಚುನಾವಣೆ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಿಗಳನ್ನು ಬಳಸಿಕೊಂಡು ಉಪಚುನಾವಣೆ ಎದುರಿಸುತ್ತಿದೆ. ಅಧಿಕಾರಿಗಳು ಸರಕಾರದ ಕೈಗೊಂಬೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಏ.9 ರಂದು ನಡೆಯಲಿರುವ ಉಪಚುನಾವಣೆಗಾಗಿ ಕಾಂಗ್ರೆಸ್ ಸರಕಾರ ಸಂಪೂರ್ಣ ಮಂತ್ರಿಮಂಡಲವನ್ನೇ ಬಳಸಿಕೊಳ್ಳುತ್ತಿದೆ. ಅಧಿಕಾರಿಗಳಿಗೆ ಪಕ್ಷದ ಪರವಾಗಿ ಕಾರ್ಯನಿರ್ವಹಿಸುವಂತೆ ಬೆದರಿಕೆಯೊಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 
 
ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಜನತೆ ಬಿಜೆಪಿ ಪರವಾಗಿದ್ದಾರೆ. ಕಾಂಗ್ರೆಸ್ ಸರಕಾರದ ವಿರುದ್ಧ ಮತಚಲಾಯಿಸಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ