ಕೆ.ಸಿ. ವೇಣುಗೋಪಾಲ್ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಶನಿವಾರ, 1 ಜುಲೈ 2017 (17:27 IST)
ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಕೇರಳದಿಂದ ತಪ್ಪಿಸಿಕೊಂಡು ಇಲ್ಲಿಗೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.
 
ಕೇರಳ ರಾಜ್ಯದಲ್ಲಿ ಬಿಜೆಪಿ ಮುಖಂಡರ ಮೇಲೆ ಕೊಲೆ, ಸುಲಿಗೆ ಮಾಡಿಸಿ ಇಲ್ಲಿಗೆ ಬಂದಿದ್ದಾರೆ. ಕೇರಳದಲ್ಲಿ ನಡೆದ ಹಿಂಸಾಚಾರಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆಯಾಗಿದೆ ಎಂದು ಆರೋಪಿಸಿದ್ದಾರೆ.
 
ನನ್ನ ಮತ್ತು ಮೋದಿ ವಿರುದ್ಧ ಸವಾಲ್ ಹಾಕುವುದು ಸರಿಯಲ್ಲ. ಸಿಎಂ ಸಿದ್ದರಾಮಯ್ಯ ಜತೆ 8-9 ತಿಂಗಳು ಕಾಲ ಕುಣಿದು ವೇಣುಗೋಪಾಲ್ ಸುಮ್ಮನಾಗುತ್ತಾರೆ ಎಂದು ಲೇವಡಿ ಮಾಡಿದ್ದಾರೆ.   
 
ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ವೇಣುಗೋಪಾಲ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿರುವುದಕ್ಕೆ ಇಂದು ಬಿಎಸ್‌ವೈ ತಿರುಗೇಟು ನೀಡಿದ್ದಾರೆ.  

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ