ಬಿಜೆಪಿಯಿಂದ ಕೆ.ಎಸ್.ಈಶ್ವರಪ್ಪ ಉಚ್ಚಾಟನೆ?

ಬುಧವಾರ, 12 ಅಕ್ಟೋಬರ್ 2016 (16:56 IST)
ಯಾವುದೇ ಕಾರಣಕ್ಕೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡುವುದಿಲ್ಲ ಎಂದು ಖಡಕ್ ಆಗಿ ಹೇಳಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರನ್ನು ಪಕ್ಷದಿಂದ ಉಚ್ಛಾಟಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತೆರೆಮರೆಯ ಕಸರತ್ತು ನಡಿಸಿದ್ದಾರೆ ಎಂದು ಹೇಳಲಾಗುತ್ತಿದೆ
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ಲಾಲ್ ಅವರು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರಿಗೆ ತಾಕೀತು ಮಾಡಿದ್ದರು.
 
ಆದರೆ, ಯಾವುದೇ ಕಾರಣಕ್ಕೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡುವುದಿಲ್ಲ ಎಂದು ವರಿಷ್ಠರ ಮಾತಿಗೆ ಶೆಡ್ಡು ಹೊಡೆದಿರುವ ಕೆ.ಎಸ್.ಈಶ್ವರಪ್ಪನವರನ್ನು ರಾಜ್ಯ ಬಿಜೆಪಿ ಪಾಳಯದಿಂದ ಉಚ್ಛಾಟಿಸುವ ತಂತ್ರಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಮುಂದಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ