ಇಂದಿನಿಂದ 3 ದಿನ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್​..!

ಭಾನುವಾರ, 7 ಆಗಸ್ಟ್ 2022 (18:57 IST)
ಕರಾವಳಿ ಭಾಗದಲ್ಲಿ ಇನ್ನೂ 3 ದಿನ ಮಳೆಯ ಅಬ್ಬರ ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಇಂದು ಮಳೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಲ್ಲಿ ಮಳೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಇಂದಿನಿಂದ 2 ದಿನ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ. ಮುಂದಿನ 3 ದಿನಗಳವರೆಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕೆಆರ್‌ಎಸ್ ಅಣೆಕಟ್ಟಿನಲ್ಲಿ ನೀರು ತೀವ್ರ ಮಟ್ಟಕ್ಕೆ ಏರಿದ್ದು, ಅಧಿಕಾರಿಗಳು ಸ್ವಲ್ಪಮಟ್ಟಿಗೆ ನೀರು ಬಿಡುವಂತೆ ಸೂಚಿಸಿದ್ದಾರೆ. ಇದರಿಂದಾಗಿ ಐತಿಹಾಸಿಕ ಶ್ರೀರಂಗಪಟ್ಟಣ ಪಟ್ಟಣದ ಕೆಲವು ಭಾಗಗಳು ಮತ್ತು ದೇವಾಲಯಗಳು ಜಲಾವೃತಗೊಂಡಿವೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ