ರಾಜ್ಯ ಬಿಜೆಪಿ ಪಾಳಯದಲ್ಲಿ ಎರಡು ಗುಂಪುಗಳಿರುವುದು ಸುಳ್ಳಲ್ಲ: ಜಿ.ಎಂ. ಸಿದ್ದೇಶ್ವರ್

ಮಂಗಳವಾರ, 24 ಜನವರಿ 2017 (17:51 IST)
ರಾಜ್ಯ ಬಿಜೆಪಿ ಪಾಳಯ ಎರಡು ಗುಂಪುಗಳಾಗಿರುವುದು ಸುಳ್ಳಲ್ಲ. ಆದರೆ, ರಾಯಣ್ಣ ಬ್ರಿಗೇಡ್‌ಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಕೇಂದ್ರದ ಮಾಜಿ ಸಚಿವ, ಸಂಸದ ಜಿ.ಎಂ.ಸಿದ್ದೇಶ್ವರ್ ತಿಳಿಸಿದ್ದಾರೆ.
 
ದಾವಣಗೆರೆ ನಗರದ ಹೈಸ್ಕೂಲ್ ಮೈದಾನದ ಪ್ರೌಡ ಶಾಲೆಯಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಕೂಡಾ ಬಿಜೆಪಿ ನಾಯಕರೇ. ಅವರು ಬಿಜೆಪಿ ಪರ ಮತಯಾಚನೆ ಮಾಡಿದ್ದಾರೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು. 
 
 ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಮುಂಬರುವ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗುತ್ತದೆ. ಯಾವ ಪಕ್ಷ ಅಧಿಕಾರದಲ್ಲಿರುತ್ತೋ ಆ ಪಕ್ಷದ ಅಭ್ಯರ್ಥಿ ಗೆಲ್ಲುವುದು ಸಹಜ. ಬಿಜೆಪಿ ಅಭ್ಯರ್ಥಿಗಳ ಪರ ಎಸ್.ಎ.ರವೀಂದ್ರನಾಥ್ ಮತಯಾಚನೆ ಮಾಡಿದ್ದರು. ಹಾಗಾದರೇ ಏಕೆ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿಲ್ಲ. ರವೀಂದ್ರನಾಥ್ ಅವರ ಶಕ್ತಿ ಎಲ್ಲಿ ಹೋಯಿತು ಎಂದರು. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ಎರಡು ಗುಂಪುಗಳಾಗಿರುವುದು ಸುಳ್ಳಲ್ಲ. ಅದನ್ನು ಪಕ್ಷದ ವರಿಷ್ಠರು ಬಗೆಹರಿಸುತ್ತಾರೆ. ಸದ್ಯದಲ್ಲಿಯೇ ನಾವೆಲ್ಲಾ ಒಂದಾಗುತ್ತೇವೆ ಎಂದು ಕೇಂದ್ರದ ಮಾಜಿ ಸಚಿವ ಸಂಸದ ಜಿ.ಎಂ.ಸಿದ್ದೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ